ಬೆಳಗಾವಿ: ಬೆಳಗಾವಿ ಸುವರ್ಣ ಸೌಧದಲ್ಲಿ 16ನೇ ವಿಧನಸಭೆಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಇಂದಿನಿಂದ ಡಿಸೆಂಬರ್ 20ರವರೆ ಅಧಿವೇಶನ ನಡೆಯಲಿದೆ.
ವಿಧಾನ ಪರಿಷತ್ ನಲ್ಲಿ ಕಲಾಪ ಆರಂಭವಾಗಿದೆ. ಇದೇ ವೇಳೆ ವಿಧಾನಸಭೆಯಲ್ಲಿ ವಂದೇಮಾತರಂ ಮೂಲಕ ಅಧಿವೇಶನಕ್ಕೆ ಚಾಲನೆ ನೀಡಲಾಯಿತು. ಅಗಲಿದ ಗಣ್ಯರಿಗೆ ಉಭಯ ಸದನಗಳಲ್ಲಿ ಸಂತಾಪ ಸೂಚಿಸಲಾಯಿತು.
ಇದೇ ವೇಳೆ ನೂತನ ಶಾಸಕರಾಗಿ ಸಿ.ಪಿ.ಯೋಗೇಶ್ವರ್, ಯಾಸೀರ್ ಪಠಾಣ್, ಅನ್ನಪೂರ್ಣ ಪ್ರಮಾಣವಚನ ಸ್ವೀಕರಿಸಿದರು.
ಅಧಿವೇಸನದ ಮೊದಲ ದಿನವಾದ ಇಂದು ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ, “ವಿಶ್ವದ ಮೊದಲ ಸಂಸತ್ತು” ಎಂಬ ಖ್ಯಾತಿಯ, “ಅನುಭವ ಮಂಟಪದ” ಬೃಹತ್ ತೈಲವರ್ಣ ಚಿತ್ರ ಕೆಲವೇ ಕ್ಷಣಗಳಲ್ಲಿ ಅನಾವರಣಗೊಲ್ಳಲಿದೆ.
ಸ್ಪೀಕರ್ ಯು. ಟಿ. ಖಾದರ್ ಅಧ್ಯಕ್ಷತೆಯಲ್ಲಿ, ಚಳಿಗಾಲ ಅಧಿವೇಶನದ ಮೊದಲ ದಿನದಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅನುಭವ ಮಂಟಪ ತೈಲಚಿತ್ರ ಅನಾವರಣಗೊಳ್ಳಲಿದೆ.