ಬೆಳಗಾವಿ: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಸ್ಕ್ರೂಡ್ರೈವರ್ ನಿಂದ ಚ್ಚುಚ್ಚಿ ಕೊಲೆಗೈದಿರುವ ಘಟನೆ ಬೆಳಗಾವಿಯ ಮಹಾಂತೇಶ ನಗರದ ಬ್ರಿಡ್ಜ್ ಬಳಿ ನಡೆದಿದೆ.
22 ವರ್ಷದ ಇಬ್ರಾಹಿಂ ಗೌಸ್ ಕೊಲೆಯಾದ ಯುವಕ. ಇಬ್ರಾಹಿಂ ಗೌಸ್ ತನ್ನ ಪ್ರೇಯಸಿ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದ. ಈ ವೇಳೆ ಯುವತಿಯ ಸಹೋದರ ಮುಜಾಮಿಲ್ ಸತ್ತಿಗೇರಿ ಎಂಬಾತ ಬೈಕ್ ಅಡ್ಡಗಟ್ಟಿದ್ದಾನೆ. ಬಳಿಕ ಸ್ಕ್ರೂಡ್ರೈವರ್ ನಿಂದ ಮನಬಂದಂತೆ ಇಬ್ರಾಹಿಂಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ರಾಹಿಂ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಇಬ್ರಾಹಿಂ ಕೊನೆಯುಸಿರೆಳೆದಿದ್ದಾನೆ. ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.