
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಶಿಕ್ಷಣ ಸಂಸ್ಥೆ ಪರವಾನಿಗಿ ನವೀಕರಣ ಮಾಡಲು ಲಂಚ ಪಡೆಯುತ್ತಿದ್ದಾಗಲೇ ಡಿಡಿಪಿಐ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.
ತುರುಮುರಿ ಬಸವೇಶ್ವರ ಶಿಕ್ಷಣ ಸಂಸ್ಥೆ ಪರವಾನಿಗಿ ನವೀಕರಣ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿಡಿಪಿಐ ಬಸವರಾಜ್ ನಾಲತವಾಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 40,000 ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಸವರಾಜ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಡಿಡಿಪಿಐ ವಿರುದ್ಧ ಬಸವೇಶ್ವರ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಅರ್ಜುನ ಕುರಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಡಿಡಿಪಿಐ ಬಸವರಾಜ್ ಅವರನ್ನು ವಶಕ್ಕೆ ಪಡೆದಿದ್ದಾರೆ.