alex Certify ಕುಂದಾನಗರಿಯ ಜನರ ಬಹುದಿನಗಳ ಕನಸು ನನಸು… | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಂದಾನಗರಿಯ ಜನರ ಬಹುದಿನಗಳ ಕನಸು ನನಸು…

ಬೆಳಗಾವಿ: ಕುಂದಾನಗರಿಯ ಜನರ ಬಹುದಿನಗಳ ಬೇಡಿಕೆ ಈಡೇರಿಕೆಯಾಗಿದೆ. ದೆಹಲಿ-ಬೆಳಗಾವಿ ಹಾಗೂ ಪುಣೆ-ಬೆಳಗಾವಿ ನಡುವೆ ವಿಮಾನ ಹಾರಾಟಕ್ಕೆ ಮುಹೂರ್ತ ಫಿಕ್ಸ್ ಆಗಿದೆ.

ಸತತ ಪ್ರಯತ್ನಗಳ ಫಲವಾಗಿ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು ದೆಹಲಿ ಮತ್ತು ಬೆಳಗಾವಿ ನಡುವೆ ಅಕ್ಟೋಂಬರ್‌ 1 ರಿಂದ ಪ್ರತಿದಿನ ವಿಮಾನಯಾನ ಸಂಚಾರದ ಸೇವೆಯನ್ನು ಪ್ರಾರಂಭಿಸಲು ಸಮ್ಮತಿಸಿದೆ. ಅಕ್ಟೋಂಬರ್‌ 29 ರಿಂದ ಸ್ಟಾರ್ ಏರ್‌ಲೈನ್ಸ್ ಸಂಸ್ಥೆಯು ಪುಣೆ-ಬೆಳಗಾವಿ ನಡುವೆ ಪ್ರತಿದಿನ ವಿಮಾನಯಾನ ಸಂಚಾರ ಸೇವೆ ಆರಂಭಿಸಲಿದೆ ಎಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಅಕ್ಟೋಂಬರ್‌ 31 ರಿಂದ ಪುಣೆ-ಬೆಳಗಾವಿ ನಡುವೆ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು ವಾರದಲ್ಲಿ 3 ದಿನ ಅಂದರೆ ಮಂಗಳವಾರ, ಗುರುವಾರ ಮತ್ತು ಶನಿವಾರ ವಿಮಾನಯಾನ ಸಂಚಾರ ನಡೆಸಲಿದೆ. ಬೆಳಗಾವಿಯಿಂದ ದೆಹಲಿ ಹಾಗೂ ಪುಣೆ ನಗರಗಳಿಗೆ ವಿಮಾನಯಾನ ಸೇವೆ ಆರಂಭವಾಗುತ್ತಿರಿವುದಕ್ಕೆ ಜನರು ಹಾಗೂ ಉದ್ಯಮಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...