ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಪ್ರಕರಣ ಖಂಡಿಸಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.
ಈ ಪ್ರಕರಣವನ್ನು ಸದನದಲ್ಲಿ ಚರ್ಚಿಸುವಂತೆ ಹೈಕಮಾಂಡ್ ಸೂಚನೆ ಬೆನ್ನಲ್ಲೇ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಬೆಳಗಾವಿಯಲ್ಲಿ ಅಧಿವೇಶನ ನಡೆದಿದ್ದ ಸಂದರ್ಭದಲ್ಲೇ ವಂಟಮೂರಿಯಲ್ಲಿ ಇಂತಹ ಘಟನೆ ನಡೆದಿರುವುದು ಖಂಡನೀಯ. ಈ ವಿಚಾರವಾಗಿ ಬೆಳಗಾವಿ ಅಧಿವೇಶನ ಇಂದು ಮುಗಿಯುತ್ತಿದ್ದಂತೆ ಮಧ್ಯಾಹ್ನ 3:30ಕ್ಕೆ ಚನ್ನಮ್ಮ ವೃತ್ತದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.
ನಾಳೆ ಕೇಂದ್ರದಿಂದ ಒಂದು ತಂಡ ಬೆಳಗಾವಿಗೆ ಭೇಟಿ ನೀಡಲಿದೆ. ಸಂಸದರಾದ ಅಪರಾಜಿತ್ ಸಾರಂಗಿ, ಸುನೀತಾ ದುಗ್ಗಲ್, ರಂಜಿತಾ ಕೋಲಿ, ಲಾಕೆಟ್ ಚಟರ್ಜಿ, ಆಶಾ ಲಾಕಡಾ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಲಿದ್ದಾರೆ ಎಂದರು.
ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆ ರಾಜ್ಯದ ಜನತೆ ತಲೆತಲಿಗ್ಗುವಂತದ್ದು, ಸರ್ಕಾರ ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಿದೆ ಎಂದು ವಾಗ್ದಾಳಿ ನಡೆಸಿದರು.