![](https://kannadadunia.com/wp-content/uploads/2019/08/hindalaga-jail-ss.jpg)
ಬೆಳಗಾವಿ: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತ ನಾಲ್ವರನ್ನು ಜೈಲಿಗೆ ಕಳುಹಿಸಲಾಗಿದೆ.
ಪ್ರಕರಣ ಸಂಬಂಧ ಬೆಳಗಾವಿಯ ಕಾಕತಿ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದು, ಬಂಧಿತರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದೆ. ಅವರಲ್ಲಿ ನಾಲ್ವರು ಮಹಿಳಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದ್ದು, ಹಿಂಡಲಗಾ ಜೈಲಿಗೆ ರವಾನೆ ಮಾಡಲಾಗಿದೆ.
ಇನ್ನು ಮೂರು ಆರೋಪಿಗಳಾದ ಬಸಪ್ಪ ನಾಯಕ್, ರಾಜು ನಾಯಕ್, ಕೆಂಪಣ್ಣ ಎಂಬುವವರನ್ನು ತೀವ್ರ ವಿಚಾರಣೆಗೊಳಪಡಿಸಲಾಗಿದೆ. ಈ ಆರೋಪಿಗಳನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲಿಸ್ ಕಸ್ಟಡಿಗೆ ಪಡೆಯಲು ಸಿದ್ಧತೆ ನಡೆಸಲಾಗಿದೆ.
ಪ್ರೀತಿಸಿದ ಯುವತಿಯೊಂದಿಗೆ ಯುವಕ ಓಡಿಹೋದ ಹಿನ್ನೆಲೆಯಲ್ಲಿ ಯುವತಿ ಮನೆಯವರು ಬೆಳಗಾವಿಯ ವಂಟಮೂರಿ ಗ್ರಾಮದ ಯುವಕನ ಮನೆ ಮೇಲೆ ದಾಳಿ ನಡೆಸಿದ್ದರು. ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು.