ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರ ಅಪರಾಧಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಶಿಕ್ಷೆಯನ್ನು ಅಮಾನತಿನಲ್ಲಿಡಲು ನ್ಯಾ.ಎಂ.ನಾಗಪ್ರಸನ್ನ ಅವರಿದ್ಧ ಹೈಕೋರ್ಟ್ ಪೀಠ ಆದೇಶ ನೀಡಿದೆ. ಈ ಮೂಲಕ ಪ್ರಕರಣದಲ್ಲಿ ಅಪರಾಧಿಗಳಿಗೆ ವಿಧಿಸಲಾಗಿದ್ದ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ಅಮಾನತಿನಲ್ಲಿಡಲಾಗಿದೆ.
ಇನ್ನು ದಂಡದ ಮೊತ್ತದಲ್ಲಿ ಶೇ.25ರಷ್ಟು ಕೋರ್ಟ್ ನಲ್ಲಿ ಠೇವಣಿ ಇಡುವಂತೆ ಷರತ್ತು ವಿಧಿಸಲಾಗಿದೆ. 6 ವಾರಗಳಲ್ಲಿ ಅಪರಾಧಿಗಳು ಕೋರ್ಟ್ ನಲ್ಲಿ ಠೇವಣಿ ಇಡಬೇಕು ಎಂದು ಸೂಚನೆ ನೀಡಲಾಗಿದೆ. ಶಿಕ್ಷೆ ಅಮಾನತು ಹಿನ್ನೆಲೆಯಲ್ಲಿ ಶಾಸಕ ಸತೀಶ್ ಸೈಲ್ ಹಾಗೂ ಇತರ ಅಪರಾಧಿಗಳು ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.