ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಅರ್ಜಿ ವಿಚಾರಣೆ ಇತ್ಯರ್ಥವಾಗುವರೆಗೂ ಕಾರವಾರ ಕ್ಷೇತ್ರಕ್ಕೆ ಉಪಚುನಾವಣೆ ನಡೆಸದಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸತೀಶ್ ಸೈಲ್ ಗೆ ವಿಧಿಸಿರುವ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟಿರುವ ಹೈಕೋರ್ಟ್, ಕಾರವಾರ ಕ್ಷೇತ್ರಕ್ಕೆ ಉಪಚುನಾವಣೆ ನಡೆಸದಂತೆ ಸೂಚನೆ ನೀಡಿದೆ.
ಜನಪ್ರತಿನಿಧಿಗಳ ಕೋರ್ಟ್ ನೀಡಿರುವ ಶಿಕ್ಷೆಗೆ ತಡೆಯಾಜ್ಞೆ ಕೋರಿ ಸತೀಶ್ ಸೈಲ್ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ಹೊರಡಿಸಿದೆ. ಅಲ್ಲದೇ ವಿಧಾನಸಭೆ ಕಲಾಪದಲ್ಲಿಯೂ ಭಾಗವಹಿಸದಂತೆ ಸೂಚಿಸಿದೆ.