
ಬೆಳಗಾವಿ: ಬೋರ್ ವೆಲ್ ನೀರು ಸೇವಿಸಿ 41 ಜನರು ಒಂದೇ ದಿನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ನಡೆದಿದೆ.
ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥರಾಗಿದ್ದ ಗ್ರಾಮಸ್ಥರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ಹಾಗೂ ಮೂವರನ್ನು ಬೈಲಹೊಂಗಲ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿತ್ರಾಣಗೊಂಡಿದ್ದ ಈರವ್ವ ಗಾಳಿಮಠ (63) ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿದೆ.
ಮನೆಗಳಿಗೆ ಪೂರೈಸುತ್ತಿದ್ದ ಬೋರ್ ವೆಲ್ ನೀರಿನ ಪೈಪ್ ಲೈನ್ ನಲ್ಲಿ ಚರಂಡಿ ನೀರು ಸೇರಿಕೊಂಡಿದ್ದರಿಂದ ಈ ಅವಘಡ ಸಂಭವಿಸಿದೆ. ಚಚಡಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಸುತ್ತಲಿನ ಪ್ರದೇಶಗಳಲ್ಲಿ ಸಮಸ್ಯೆ ಉಲ್ಬಣಗೊಂಡಿದ್ದು, ಇಡೀ ಗ್ರಾಮದ ಜನರು ಅಸ್ವಸ್ಥರಾಗುವ ಮುನ್ನ ಎಚ್ಚೆತ್ತುಕೊಂಡ ಅಧಿಕಾರಿಗಳು ಗ್ರಾಮಗಳ ಮನೆ ಮನೆಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುತ್ತಿದ್ದಾರೆ. ಅಲ್ಲದೇ ಗ್ರಾಮದಲ್ಲಿ ನಲವರು ವೈದ್ಯರು ಹಗೂ ವೈದಕೀಯ ಸಿಬ್ಬಂದಿಗಳು ಬೀಡುಬಿಟ್ಟಿದ್ದಾರೆ.