ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಪಕ್ಷದಲ್ಲಿದ್ದರೂ ವಿರೋಧ ಪಕ್ಷದಲ್ಲಿ ಇದ್ದಂತೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಯಡಿಯೂರಪ್ಪ ಆಪ್ತನ ನಿವಾಸದ ಮೇಲೆ ಐಟಿ ದಾಳಿ ವಿಚಾರವಾಗಿ ಮಾತನಾಡಿದ ಸತೀಶ್ ಜಾರಕಿಹೊಳಿ ಈ ಹೇಳಿಕೆಯನ್ನು ನೀಡಿದ್ದಾರೆ.
ಬಿ.ಎಸ್. ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿದ ಬಳಿಕ ಎಲ್ಲವೂ ಬದಲಾಗಿದೆ. ಅವರು ಈಗ ಬಿಜೆಪಿಯಲ್ಲಿದ್ದರೂ ವಿರೋಧ ಪಕ್ಷದಲ್ಲಿ ಇದ್ದಂತೆ. ಯಡಿಯೂರಪ್ಪ ಬಿಜೆಪಿ ವಿರೋಧ ಪಕ್ಷದಲ್ಲಿದ್ದಾರೆ. ಬಿಜೆಪಿಯಲ್ಲಿ ಆಂತರಿಕ ಸಮಸ್ಯೆಗಳು ಸಾಕಷ್ಟಿವೆ ಎಂದು ಹೇಳಿದರು.
ಇನ್ನು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು, ಕಳೆದ ಒಂದು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಅನುದಾನ, ಪ್ರೋತ್ಸಾಹ ಧನ ಎಲ್ಲದರಲ್ಲೂ ಕಡಿತವಾಗಿದೆ. ಇವೆಲ್ಲದ್ದಕ್ಕೆ ಬಿಜೆಪಿ ಶಾಸಕರೇ ಉತ್ತರ ನೀಡಬೇಕು ಎಂದು ಹೇಳಿದ್ರು.