ಬೆಳಗಾವಿ : ಇಂದಿನಿಂದ ಬೆಳಗಾವಿ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಭದ್ರತೆಗೆ 5 ಸಾವಿರ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.
ಒಟ್ಟು 37 ಡಿವೈಎಸ್ ಪಿ, 9 IPS , 12 ಹೆಚ್ಚುವರಿ SP, 92 PI, 219 ಪಿಎಸ್ಐ, 366 ಎಎಸ್ಐ, 3 ಸಾವಿರ ಪೊಲೀಸ್ ಕಾನ್ಸ್ಟೇಬಲ್, 200 ಹೋಮ್ ಗಾರ್ಡ್ಸ್, 35 ಕೆಎಸ್ಆರ್ಪಿ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. 2 ಸಾವಿರ ಪೊಲೀಸ್ ಸಿಬ್ಬಂದಿ ವಾಸ್ತವ್ಯಕ್ಕೆ ಸುವರ್ಣ ಸೌಧ ಸಮೀಪದಲ್ಲೇ ಜರ್ಮನ್ ಟೆಂಟ್ ನಿರ್ಮಾಣ ಮಾಡಲಾಗಿದೆ.
ಸರ್ಕಾರದಿಂದ ಈಗಾಗಲೇ ಹೊರಡಿಸಿದ ಸುಗ್ರೀವಾಜ್ಞೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಗ್ರಾಮ ಸ್ವರಾಜ್ ತಿದ್ದುಪಡಿ ವಿಧೇಯಕ, ಕರಾವಳಿ ಕರ್ನಾಟಕ ಅಭಿವೃದ್ಧಿ ಮಂಡಳಿ ವಿಧೇಯಕ, ಕರ್ನಾಟಕ ಸರಕು ಮತ್ತು ಸೇವಾ ವಿಧೇಯಕಗಳನ್ನು ಸದನದಲ್ಲಿ ಮಂಡಿಸಲಾಗುವುದು. ಇವುಗಳೊಂದಿಗೆ ಇನ್ನೂ ಹಲವು ವಿದೇಯಕಗಳು ಮಂಡನೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸರ್ಕಾರದ ಕಿವಿ ಹಿಂಡಲು ವಿಪಕ್ಷಗಳು ಕೂಡ ಸಜ್ಜಾಗಿದೆ.