ಬಳ್ಳಾರಿ: ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೈಡ್ರಾಮಾ ನಡೆದಿದೆ.
ಸಚಿವರಾದ ಎಂ.ಬಿ.ಪಾಟೀಲ್, ಜಮೀರ್ ಅಹ್ಮದ್, ನಾಗೇಂದ್ರ ಅವರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ತುಕರಾಂ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿ ಹೊರ ಬರುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರೊಂದಿಗೆ ನಾಮಪತ್ರ ಸಲ್ಲಿಸಲು ಆಗಮಿಸಿದ್ದಾರೆ.
ಈ ವೇಳೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸಚಿವರು, ಅಭ್ಯರ್ಥಿಯ ವಾಹನವನ್ನು ಸುತ್ತುವರೆದು ಮೋದಿ, ಮೋದಿ ಘೋಷಣೆಗಳನ್ನು ಕೂಗಿದ್ದಾರೆ. ಶ್ರೀರಾಮುಲು ಪರ ಜೈ ಕಾರ ಹಾಕಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಬಿಜೆಪಿ ನಾಯಕರನ್ನು ಚದುರಿಸಿ ಕಾಂಗ್ರೆಸ್ ನಾಯಕರಿಗೆ ತೆರಳು ಅನುವುಮಾಡಿಕೊಟ್ಟ ಘಟನೆ ನಡೆದಿದೆ.