ಮಂಗಳೂರು: ರಸ್ತೆ ದಾಟುವಾಗ ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಕಡಿಮೆಯೇ. ರಸ್ತೆ ದಾಟುವಾಗ ಬೈಕ್ ಡಿಕಿ ಹೊಡೆದು ಮಹಿಳೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್ ನ ಎಲ್ಐಸಿ ಕಚೇರಿ ಬಳಿ ನಡೆದಿದೆ.
ಸರಸ್ವತಿ (50) ಮೃತ ಮಹಿಳೆ. ಎಲ್ಐಸಿ ಕಚೇರಿಯಿಂದ ಕೆಲಸ ಮುಗಿಸಿಕೊಂಡು ಬಂದ ಮಹಿಳೆ ರಸ್ತೆ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸರಸ್ವತಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಹಿಳೆ ಮೃತಪಟ್ಟಿದ್ದಾರೆ. ಪಾಣೆ ಮಂಗಳೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.