![](https://kannadadunia.com/wp-content/uploads/2023/05/Belur-Gopalakrishna-364884404-1551838376.gif)
ಶಿವಮೊಗ್ಗ: ಕಾಂಗ್ರೆಸ್ ನಿಂದ ಕಾಲ್ಕಿತ್ತವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.
ಮಂಗಳವಾರ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನನಗೆ ಟಿಕೆಟ್ ಘೋಷಣೆಯಾದ ನಂತರ ಕಾಂಗ್ರೆಸ್ ನಿಂದ ಹೊರ ಹೋದವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಜಿಲ್ಲೆಯಲ್ಲಿ ನನ್ನ ಪತ್ರಗಳಿಗೆ ತಡೆಯೊಡ್ಡುವವರು ಯಾರೂ ಇಲ್ಲ. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನನಗೆ ಬೆಂಬಲಿಸುತ್ತಾರೆ. ಪಕ್ಷದ ಆಂತರಿಕ ವಿಚಾರಗಳನ್ನು ವರಿಷ್ಠರ ಗಮನಕ್ಕೆ ತಂದಿದ್ದು, ಬಗೆಹರಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವೈಯಕ್ತಿಕ ವೈಷಮ್ಯವಿಲ್ಲ. ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹಿರಿಯ ಶಾಸಕನಾಗಿರುವ ನನ್ನ ಗಮನಕ್ಕೂ ಬಾರದೆ ಕೆಲಸ ಆಗುತ್ತಿರುವುದನ್ನು ಕೇಳುವುದು ನಮ್ಮ ಹಕ್ಕು. ಅದರಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದ್ದಾರೆ.