ಬೆಂಗಳೂರು: ಕಾವೇರಿ ನೀರಾವರಿ ನಿಗಮ ನಿಯಮಿತದ ಮಾಜಿ ಎಂಡಿ ಟಿ.ಎನ್. ಚಿಕ್ಕರಾಯಪ್ಪ ಅವರಿಗೆ ಸೇರಿದ 1.10 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.
ಚಿಕ್ಕರಾಯಪ್ಪ ಕೋಟ್ಯಂತರ ರೂಪಾಯಿ ಬೇನಾಮಿ ಆಸ್ತಿ ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಈಡಿ ತನಿಖೆ ಕೈಗೊಂಡಿದೆ. ಈ ಹಿಂದೆ ಎಸಿಬಿ ದಾಳಿ ನಡೆಸಿದ ವೇಳೆ ಕೋಟ್ಯಂತರ ರೂ. ಪತ್ತೆಯಾಗಿತ್ತು. ಸರ್ಕಾರಿ ಸೇವೆಯ ಸಂದರ್ಭದಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವುದು ಬಹಿರಂಗವಾಗಿತ್ತು. ಅಕ್ರಮ ಆಸ್ತಿಯ ಬಗ್ಗೆ ತನಿಖೆ ನಡೆಸಿದಾಗ ಬೇನಾಮಿಯಾಗಿ ಅಕ್ರಮ ಸಂಪತ್ತು ಗಳಿಸಿರುವುದು ತನಿಖೆಯಲ್ಲಿ ಗೊತ್ತಾಗಿತ್ತು. ಇಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, 1.1 ಕೋಟಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.