ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಬೆಳಗ್ಗೆ 10:30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆಯ ಪ್ರಯೋಜನಗಳನ್ನು ಬಿಡುಗಡೆ ಮಾಡಲಿದ್ದಾರೆ.
ಶಾಲೆಗೆ ಹೋಗುವ ಮಕ್ಕಳಿಗೆ ವಿದ್ಯಾರ್ಥಿವೇತನ ವರ್ಗಾಯಿಸುತ್ತಾರೆ. ಮಕ್ಕಳಿಗಾಗಿ PM CARES ನ ಪಾಸ್ ಬುಕ್ ಮತ್ತು ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಆರೋಗ್ಯ ಕಾರ್ಡ್ ಅನ್ನು ಹಸ್ತಾಂತರಿಸಲಾಗುವುದು.
11 ಮಾರ್ಚ್ 2020 ರಿಂದ ಫೆಬ್ರವರಿ 28 ರ ಅವಧಿಯಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಪೋಷಕರು, ಕಾನೂನುಬದ್ಧ ಪಾಲಕರು, ದತ್ತು ಪಡೆದ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳನ್ನು ಬೆಂಬಲಿಸಲು ಕಳೆದ ವರ್ಷ ಮೇ 29 ರಂದು ಪ್ರಧಾನ ಮಂತ್ರಿ ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆಯನ್ನು ಪ್ರಾರಂಭಿಸಿದರು.
ಮಕ್ಕಳಿಗೆ ವಸತಿ ಶಿಕ್ಷಣ ಮತ್ತು ವಿದ್ಯಾರ್ಥಿವೇತನಗಳ ಮೂಲಕ ಅವರನ್ನು ಸಬಲೀಕರಣಗೊಳಿಸುವ ಮೂಲಕ ಮಕ್ಕಳ ಸಮಗ್ರ ಆರೈಕೆ ಮತ್ತು ರಕ್ಷಣೆಯನ್ನು ಖಚಿತಪಡಿಸುವುದು. ಅವರಿಗೆ 23 ವರ್ಷ ವಯಸ್ಸಾದ ಮೇಲೆ 10 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡಲಾಗುವುದು. ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸುವುದ ಯೋಜನೆಯ ಉದ್ದೇಶವಾಗಿದೆ.
ಮಕ್ಕಳ ವಿವರಗಳನ್ನು ನೋಂದಾಯಿಸಲು pmcaresforchildren.in ಹೆಸರಿನ ಪೋರ್ಟಲ್ ಅನ್ನು ಪ್ರಾರಂಭಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ದೇಶಾದ್ಯಂತ ಇರುವ ಅನಾಥ ಮಕ್ಕಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.