ಗರ್ಭಿಣಿ ಹಸುವಿನ ಮೇಲೆ 29 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಈಗ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಪ್ರಕರಣದ ವಿವರ: ಉತ್ತರ ಚಂದನ್ಪಿಡಿ ಏರಿಯಾದ ನಮ್ಕಾನಾ ಬ್ಲಾಕ್ ನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಪ್ರದ್ಯುತ್ ಭೂಯಿ ಈಗ ಬಂಧನಕ್ಕೊಳಗಾಗಿದ್ದಾನೆ. ಈತ ತನ್ನ ನೆರೆಮನೆಯ ಆರ್ತಿ ಭೂಯಿ ಎಂಬವರ ಹಸುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗಿದೆ.
ಮಧ್ಯರಾತ್ರಿ ಸುಮಾರಿಗೆ ಹಸುಗಳನ್ನು ಕಟ್ಟಿ ಹಾಕಿದ್ದ ಸ್ಥಳಕ್ಕೆ ಹೋದ ಈತ ಈ ಘೋರ ಕೃತ್ಯವಸಗಿದ್ದು, ಇದರ ಪರಿಣಾಮ ಗರ್ಭಿಣಿ ಹಸು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದೆ.
ಈತ ಈ ಹಿಂದೆಯೂ ಹಲವು ಅಪರಾಧ ಪ್ರಕರಣಗಳಲ್ಲಿ ಪಾಲ್ಗೊಂಡಿದ್ದ ಎಂದು ಹೇಳಲಾಗಿದ್ದು, ಈತನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ 14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.