
ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮತ್ತೋರ್ವ ಪ್ರಯಣಿಕನನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತನ ಶರ್ಟ್ ನಲ್ಲಿ 3995.22 ಗ್ರಾಂ ಚಿನ್ನ ಪತ್ತೆಯಾಗಿದೆ.
ತಕ್ಷಣ ಆತನನ್ನು ಬಂಧಿಸಿದ ಅಧಿಕಾರಿಗಳು ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯ ಬರೋಬ್ಬರಿ 3,44,38,796 ರೂಪಾಯಿ ಎಂದು ತಿಳಿದುಬಂದಿದೆ.