ಬೆಂಗಳೂರು: ಗಣರಾಜ್ಯೋತ್ಸವದ ದಿನದಂದು ರಾಜ್ಯ ರಾಜಧಾನಿ ಬೆಂಗಳೂರಿನ ವಿವಿಧೆಡೆಗಳಲ್ಲಿ ಬಾಂಬ್ ಸ್ಫೋಟಗೊಳ್ಳುವುದಾಗಿ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮನ್ಸೂರ್ ಬಂಧಿತ ಆರೋಪಿ. ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಕರೆ ಮಾಡಿದ್ದ ವ್ಯಕ್ತಿ, ಗಣರಾಜ್ಯೋತ್ಸವದ ದಿನದಂದು ಬೆಂಗಳೂರಿನ ವಿವಿದೆಡೆ ರಾಮೇಶ್ವರಂ ಕೆಫೆ ರೀತಿಯಲ್ಲಿ ಬಾಂಬ್ ಸ್ಫೋಟ ನಡೆಸಲು ಸಿದ್ಧತೆ ನಡೆದಿದೆ ಎಂದು ಹೇಳಿದ್ದ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪತ್ತೆ ಮಾಡಿ ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ವ್ಯವಹಾರದಲ್ಲಿ ನಷ್ಟವುಂಟಾಗಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾಗಿ ತಿಳಿದುಬಂದಿದೆ.