
ಬೆಂಗಳೂರು: ಅಪಾರ್ಟ್ ಮೆಂಟ್ ವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಪುಲಕೇಶಿನಗರದಲ್ಲಿ ನಡೆದಿದೆ.
ವಿಶ್ರಾಂ ಅಪಾರ್ಟ್ ಮೆಂಟ್ ನಲ್ಲಿ ಈ ಅವಘಡ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯ ಮೇಲ್ಛಾವಣಿ, ಗೋಡೆ ಛಿದ್ರ ಛಿದ್ರಗೊಂಡಿದೆ. ಕಿಟಕಿ ಗ್ರಿಲ್ ಗಳು ರಸ್ತೆಗೆ ಬಿದ್ದಿವೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.
ಗಾಯಾಳುಗಳಾದ ಸಿದ್ದೇಶ್, ಸಿಲಿಕಾ ಹಾಗೂ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.