ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಸಿಲಿಂಡರ್ ಸ್ಫೋಟ ಅವಘಡ ಸಂಭವಿಸಿದೆ. ದಾಸರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ದಿಜುಧಾರ್, ಅಂಜಲಿದಾಸ್, ಮನುಶ್ರೀ, ತಿಪ್ಪರುದ್ರಸ್ವಾಮಿ, ಮನು, ಶೋಭಾ, ಕರೀಬುಲ್ಲ ಎಂಬುವರು ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಗಾಯಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.