
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಬಯೋ ಇನ್ನೋವೇಶನ್ ಸೆಂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಹೊತ್ತಿ ಉರಿದಿದೆ.
ಕೆಮಿಕಲ್ ರಿಯಾಕ್ಷನ್ ನಿಂದಾಗಿ ಬೆಂಕಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಉದ್ಯೋಗಿಗಳು ಹೊರಗೊಡಿಬಂದಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಅವಘಡದಲ್ಲಿ ಬಯೋ ಇನ್ನೋವೇಷನ್ ಸೆಂಟರ್ ಶೇ.70ರಷ್ಟು ಸುಟ್ಟು ಕರಕಲಾಗಿದೆ.