alex Certify BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಗಾರ್ಮೆಂಟ್ಸ್ ಗೋದಾಮಿನಲ್ಲಿ ಬೆಂಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಗಾರ್ಮೆಂಟ್ಸ್ ಗೋದಾಮಿನಲ್ಲಿ ಬೆಂಕಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಗಾರ್ಮೆಂಟ್ಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಕಟ್ಟಡ ಹೊತ್ತಿ ಉರಿದಿದೆ.

ಬೆಂಗಳೂರಿನ ಬೊಮ್ಮಸಂದ್ರದ ಗಾರ್ಮೆಂಟ್ಸ್ ಗೋದಾಮಿನಲ್ಲಿ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಗೋದಾಮಿನಲ್ಲಿ ಬಟ್ಟೆ, ಲೆದರ್, ಕೆಮಿಕಲ್ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...