
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಬ್ಯಾಡರಹಳ್ಳಿ ಬಳಿಯ ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಕಾರ್ಖಾನೆಯಲ್ಲಿ ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದೆ. ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಘಟನಾ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅದೃಷ್ಟವಶಾತ್ ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.