![](https://kannadadunia.com/wp-content/uploads/2025/02/expressway-.jpg)
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ಕಟ್ಟದೇ ತಪ್ಪಿಸಿಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಿಗ್ ಶಾಕ್ ನೀಡಿದೆ.
ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಹಲವರು ಸರ್ವೀಸ್ ರಸ್ತೆ ಬಳಸುತ್ತಿದ್ದರು. ಇದೀಗ ಸರ್ವಿಸ್ ರಸ್ತೆ ಬಂದ್ ಮಾಡುವ ಮೂಲಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಾಹನ ಸವಾರರಿಗೆ ಶಾಕ್ ನೀಡಿದೆ.
ಟೋಲ್ ತಪ್ಪಿಸಿಕೊಳ್ಳಲು ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನ ಸವಾರರು ಸರ್ವೀಸ್ ರಸ್ತೆಯ ಮೂಲಕ ಬರುತ್ತಿದ್ದರು. ಈ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರ ಬಿಡದಿ ಬಳಿಯ ನಿರ್ಗಮನ ರಸ್ತೆ ಬಂದ್ ಮಾಡಿದೆ. ಈ ಮೂಲಕ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಇದ್ದ ಸಂಪರ್ಕ ಕಡಿತಗೊಂಡಿದೆ.
ಬೆಂಗಳೂರಿಗೆ ಬರುವ ವಾಹನ ಸವಾರರು ಬಿಡದಿ ಬಳಿಯ ಶೇಷಗಿರಿಹಳ್ಳಿ ಟೋಲ್ ನಲ್ಲಿ ಟೋಲ್ ಪಾವತಿಸಿಯೇ ಬರಬೇಕಾದ ಅನಿವಾರ್ಯತೆ ಎದುದಾರಿಗೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪದಿಸಿದ್ದಾರೆ. ಯಾವುದೇ ಸೂಚನೆ ನೀಡದೇ ಏಕಾಏಕಿ ಎಕ್ಸಿಟ್ ರಸ್ತೆಯನ್ನೇ ಬಂದ್ ಮಾಡಿರುವುದು ಸರಿಯಲ್ಲ. ರಾಮನಗರದಿಂದ ಬೆಂಗಳೂರಿಗೆ ಹೋಗುವುದಕ್ಕೂ ದುಬಾರಿ ಟೋಲ್ ಪಾವತಿಸಬೇಕಾದ ಅನಿವಾರ್ಯತೆ ತಂದಿರುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದ್ದಾರೆ.