
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಅರಮನೆ ಮೈದಾನದಲ್ಲಿ ಡೆಕೋರೇಷನ್ ವೇಸ್ಟ್ ವಸ್ತುಗಳನ್ನು ಸುರಿದಿದ್ದ ಪ್ರದೆಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿದೆ. ಸ್ಥಳೀಯರು ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.