ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರಿನ ಬೆಳ್ಳಂದೂರು ಪಬ್ ನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ಸಂಬಂಧ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸ ವರ್ಷಾಚರಣೆ ಪಾರ್ಟಿಗಾಗಿ ಯುವತಿ ಸ್ನೇಹಿತರೊಂದಿಗೆ ಪಬ್ ಗೆ ತೆರಳಿದ್ದ ವೇಳೆ ಅಪರಿಚಿತನೊಬ್ಬ ಯುವತಿಗೆ ಮದ್ಯ ಸೇವಿಸುವಂತೆ ಒತ್ತಾಯಿಸಿದ್ದಾನೆ. ಆತನ ಆಫರ್ ತಿರಸ್ಕರಿಸಿದ್ದಕ್ಕೆ ಯುವತಿಗೆ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ವೇಳೆ ಯುವತಿ ಹಾಗೂ ಅಪರಿಚಿತನ ನಡುವೆ ಗಲಾಟೆ ನಡೆದಿದ್ದು, ಪಬ್ ಸಿಬ್ಬಂದಿ ಮಧ್ಯಪ್ರವೇಶ ಮಾಡುತ್ತಿದ್ದಂತೆ ಅಪರಿಚಿತ ಪಬ್ ನಿಂದ ಕಾಲ್ಕಿತ್ತಿದ್ದಾನೆ.
ಯುವತಿಯೊಂದಿಗೆ ಅಸಭ್ಯ ವರ್ತನೆ, ಕಿರುಕುಳ ಆರೋಪದಡಿ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.