ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ನಿರ್ಮಿಸಬೇಕೆಂಬ ಬಹುದಿನಗಳ ಬೇಡಿಕೆ ಇದೀಗ ಈಡೇರುತ್ತಿದೆ. ಜನವರಿ 17ರಂದು ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್ ಆರಂಭವಾಗಲಿದೆ.
ಈ ಕುರಿತು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ನನ್ನ ಪ್ರೀತಿಯ ಬೆಂಗಳೂರಿಗರೇ ಇದೀಗ ಅಧಿಕೃತವಗಿ ಜ.17ರಂದು ಅಮೆರಿಕ ಕಾನ್ಸುಲೇಟ್ ಆರಂಭ್ವಾಗುತ್ತಿದೆ ಎಂದು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಇದನ್ನು ಸಾಧ್ಯವಾಗಿಸಿದ ಪ್ರಧಾನಿ ಮೋದಿಯವರಿಗೆ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಸಂಬಂಧ ವಿದೇಶಾಂಗ ಸಚಿವ ಜೈಶಂಕರ್ ಅವರನ್ನು ಭೇಟಿಯಾದ ಸಂದರ್ಭದ ಫೋಟೋ ಹಂಚಿಕೊಂಡಿದ್ದಾರೆ.
ಈವರೆಗೆ ವೀಸಾ ಪಡೆಯಲು ಬೆಂಗಳೂರಿಗರು ಚೆನ್ನೈ, ಹೈದರಾಬಾದ್ ಗೆ ತೆರಳಬೇಕಾಗಿತ್ತು. ಈಗ ಬೆಂಗಳೂರಿನಲ್ಲಿಯೇ ಅಮೆರಿಕಾ ದೂತಾವಾಸ ಕಚೇರಿ ಆರಂಭವಾಗುತ್ತಿರುವುದರಿಂದ ಅನುಕೂಲವಾಗಲಿದೆ.