ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ ನಡೆದಿದೆ. ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದುರುವ ಘಟನೆ ನಡೆದಿದೆ.
ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಭೀಕರವಾಗಿ ಕೊಲೆಗೈದಿದ್ದಾರೆ. ಘಟನಾ ಸ್ಥಳಕ್ಕೆ ಪೀಣ್ಯ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.