ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ಜಿಗಣಿಯಲ್ಲಿ ಪಾಕ್ ಪ್ರಜೆ ಸೇರಿದಂತೆ ನಾಲ್ವರು ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಬೆಂಗಳೂರಿನ ಪೀಣ್ಯದಲ್ಲಿ ಮತ್ತೆ ಮೂವರು ಪಾಕಿಸ್ತಾನ ಪ್ರಜೆಗಳನ್ನು ಬಂಧಿಸಲಾಗಿದೆ.
ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷನನ್ನು ಜಿಗಣಿ ಪೊಲೀಸರು ಪೀಣ್ಯದಲ್ಲಿ ಬಂಧಿಸಿದ್ದಾರೆ. ಜಿಗಣಿಯಲ್ಲಿ ಬಂಧಿಸಲ್ಪಟ್ಟಿದ್ದ ಪಾಕ್ ಪ್ರಜೆ ರಶೀದ್ ಅಲ್ ಸಿದ್ದಕಿಯೊಂದಿಗೆ ಸಂಪರ್ಕದ ಜಾಡು ಹಿಡಿದು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಹೆಚ್ಚಿನ ತನಿಖೆಗಾಗಿ ಈಗಾಗಲೇ ಪೊಲೀಸರ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ.