ಬೆಂಗಳೂರು : ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ನರ್ಸಿಂಗ್ ವಿದ್ಯಾರ್ಥಿ ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ವಿದ್ಯಾರ್ಥಿನಿ ದಿಯಾ ಮಂಡೋಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೌಟುಂಬಿಕ ಕಾರಣಕ್ಕೆ ಸೂಸೈಡ್ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ಕಳೆದ 3 ದಿನದ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಯುವತಿ ದಿಯಾ ಮಂಡೋಲ್ ಬೆಂಗಳೂರಿನ ನರ್ಸಿಂಗ್ ಕಾಲೇಜೊಂದರಲ್ಲಿ ನರ್ಸಿಂಗ್ ಓದುತ್ತಿದ್ದಳು.