alex Certify ಮಾಜಿ ಶಾಸಕ ಅನಿಲ್ ಲಾಡ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಶಾಸಕ ಅನಿಲ್ ಲಾಡ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು

ಬೆಂಗಳೂರಿನಲ್ಲಿ ಮಾಜಿ ಶಾಸಕ ಅನಿಲ್ ಲಾಡ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಂಜಯನಗರ ಮುಖ್ಯ ರಸ್ತೆಯ ಸಿಗ್ನಲ್ ನಲ್ಲಿ ನಿನ್ನೆ ಘಟನೆ ನಡೆದಿದೆ. ಗೆಳೆಯನ ಮನೆಗೆ ಹೋಗಿ ಅನಿಲ್ ಲಾಡ್ ದಂಪತಿ ರೇಂಜ್ ರೋವರ್ ಕಾರಿನಲ್ಲಿ ಮನೆಗೆ ವಾಪಸ್ ಬರುವಾಗ ಘಟನೆ ನಡೆದಿದೆ. ಅವರ ಪತ್ನಿ ಆರತಿ ಕಾರು ಚಾಲನೆ ಮಾಡುತ್ತಿದ್ದರು. ಪಕ್ಕದಲ್ಲಿ ಅನಿಲ್ ಲಾಡ್ ಕುಳಿತುಕೊಂಡಿದ್ದರು. ನಸುಕಿನ ಜಾವ 3 ಗಂಟೆ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.

ಸಿಗ್ನಲ್ ನಲ್ಲಿ ತಿರುವು ತೆಗೆದುಕೊಳ್ಳುವಾಗ ಕಾರು ಮರಕ್ಕೆ ಡಿಕ್ಕಿ ಆಗಿದೆ. ನಿದ್ದೆಯ ಮಂಪರಿನಲ್ಲಿದ್ದ ಆರತಿ ಅವರ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅನಿಲ್ ಲಾಡ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...