ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ವಿಧಾನಸೌಧದ ಕೂಗಳತೆ ದೂರದಲ್ಲಿ ಕಾಫಿ ಬೋರ್ಡ್ ಸಿಗ್ನಲ್ ಬಳಿ ಅಪಘಾತ ಸಂಭವಿಸಿದ್ದು, ಮಹಿಳೆ ಮೃತಪಟ್ಟಿದ್ದಾರೆ.
ಆಟೋದಲ್ಲಿದ್ದ ಪ್ಯಾಸೆಂಜರ್ ಶಾಲಿನಿ ಮೃತಪಟ್ಟಿದ್ದಾರೆ. ಬೆನ್ಸನ್ ಟೌನ್ ಚಿನ್ನಪ್ಪ ಗಾರ್ಡನ್ ನಿಂದ ಆಟೋ ಚಾಲಕ ಬರುತ್ತಿದ್ದ. ನಮ್ಮ ಯಾತ್ರಿ ಆ್ಯಪ್ ನಲ್ಲಿ ಆಟೋ ಬುಕ್ ಮಾಡಿದ್ದ. ಮಹಿಳೆಯನ್ನು ಮೆಜೆಸ್ಟಿಕ್ ಗೆ ಡ್ರಾಪ್ ಮಾಡಲು ಆಟೋ ತೆರಳುತ್ತಿತ್ತು. ಈ ವೇಳೆ ಸಿಗ್ನಲ್ ಜಂಪ್ ಮಾಡಿ ವೇಗವಾಗಿ ಬಂದ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದ್ದು, ಶಾಲಿನಿ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಆಟೋ ಚಾಲಕ ಕೂಡ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.