
ಬೆಂಗಳೂರು: ಬೆಂಗಳೂರಿನಲ್ಲಿ ನಸುಕಿನ ಜಾವ ಭೀಕರ ಅಪಘಾತ ಸಂಭವಿಸಿದೆ. ಫ್ಲೈಓವರ್ ಮೇಲೆ ಬೈಕ್ ಗೆ ಗುದ್ದಿದ ಕಾರ್ ಫ್ಲೈಓವರ್ ನಿಂದ ಕೆಳಗೆ ಬಿದ್ದು ಅಪಘಾತ ಸಂಭವಿಸಿದೆ.
ಕಾರ್ ನಲ್ಲಿದ್ದ ಮೂವರು, ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಶವಂತಪುರ ಸರ್ಕಲ್ ನಲ್ಲಿ ನಸುಕಿನ 3:45ರ ವೇಳೆ ಘಟನೆ ನಡೆದಿದೆ. ಫ್ಲೈ ಓವರ್ ಮೇಲೆ ಡಿವೈಡರ್ ನಿಂದ ಹಾರಿ ಬೈಕ್ ಗೆ ಡಿಕ್ಕಿ ಹೊಡೆದ ಕಾರ್ ಬೈಕ್ ಸಹಿತ 40 ಅಡಿ ಕೆಳಗೆ ಬಿದ್ದಿದೆ. ಕೆಲಗೆ ಬಿದ್ದ ರಭಸಕ್ಕೆ ವಾಹನಗಳು ನಜ್ಜುಗುಜ್ಜಾಗಿವೆ. ತಮಿಳುನಾಡಿನ ನೋಂದಣಿ ಸಂಖ್ಯೆ ಹೊಂದಿರುವ ಕಾರ್ ಇದಾಗಿದೆ. ಸ್ಥಳೀಯರು, ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಯಶವಂತಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.