ಬೆಂಗಳೂರು: ಬೆಂಗಳೂರಿನ ಯಶವಂತಪುರ ಫ್ಲೈಓವರ್ ಮೇಲೆ ಮತ್ತೊಂದು ಅಪಘಾತ ಸಂಭವಿಸಿದೆ. ಟೈಯರ್ ಬ್ಲಾಸ್ಟ್ ಆಗಿ ಫ್ಲೈಓವರ್ ಮೇಲೆ ಬೊಲೆರೋ ವಾಹನ ಪಲ್ಟಿಯಾಗಿದೆ. ವಾಹನದಲ್ಲಿದ್ದ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುಬ್ಬಳ್ಳಿಯಿಂದ ತಮಿಳುನಾಡಿನ ಕೃಷ್ಣಗಿರಿಗೆ ಗೆಣಸು ಸಾಗಿಸುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಮುಂಜಾನೆ 5.30ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ತಡೆಗೋಡೆಗೆ ಡಿಕ್ಕಿ ಹೊಡೆದು ವಾಹನ ಪಲ್ಟಿಯಾಗಿದ್ದು, ಅಪಘಾತದ ರಭಸಕ್ಕೆ ರಸ್ತೆಗೆ ತುಂಬೆಲ್ಲಾ ಗೆಣಸಿನ ಚೀಲಗಳು ಬಿಟ್ಟಿವೆ. ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.