ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್ ದಾಳಿ ಪ್ರಕರಣ ನಡೆದಿದೆ. ಹಾಡಹಗಲೇ ಯುವಕನ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ.
ನಾಗೇಶ್ ಕೊಂಡ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಆಸಿಡ್ ಎರಚಿ ಪರಾರಿಯಾಗಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.