ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಐದು ದಿನಗಳ ಅವಧಿಯಲ್ಲಿ ಎರಡು ಕೋಟಿ ರೂಪಾಯಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ. ಡಿಸೆಂಬರ್ 25 ರಿಂದ 29 ರವರೆಗೆ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 16 ಪ್ರಯಾಣಿಕರಿಂದ ಎರಡು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಕೌಲಲಾಂಪುರ, ಜಡ್ಡಾ, ಶಾರ್ಜಾ, ಬ್ಯಾಂಕಾಕ್ ನಿಂದ ಆಗಮಿಸಿದ್ದ ಪ್ರಯಾಣಿಕರು ಸಾಕ್ಸ್, ಜೇಬು, ಕರ ವಸ್ತ್ರ ಒಳಉಡುಪಿನಲ್ಲಿ 3ಕೆಜಿ 311 ಗ್ರಾಂ ಚಿನ್ನ ಇಟ್ಟುಕೊಂಡು ಬಂದಿದ್ದು, ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.