alex Certify ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಐದೇ ದಿನದಲ್ಲಿ ಎರಡು ಕೋಟಿ ರೂ. ಮೌಲ್ಯದ ಚಿನ್ನ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಐದೇ ದಿನದಲ್ಲಿ ಎರಡು ಕೋಟಿ ರೂ. ಮೌಲ್ಯದ ಚಿನ್ನ ವಶಕ್ಕೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಐದು ದಿನಗಳ ಅವಧಿಯಲ್ಲಿ ಎರಡು ಕೋಟಿ ರೂಪಾಯಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ. ಡಿಸೆಂಬರ್ 25 ರಿಂದ 29 ರವರೆಗೆ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 16 ಪ್ರಯಾಣಿಕರಿಂದ ಎರಡು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಕೌಲಲಾಂಪುರ, ಜಡ್ಡಾ, ಶಾರ್ಜಾ, ಬ್ಯಾಂಕಾಕ್ ನಿಂದ ಆಗಮಿಸಿದ್ದ ಪ್ರಯಾಣಿಕರು ಸಾಕ್ಸ್, ಜೇಬು, ಕರ ವಸ್ತ್ರ ಒಳಉಡುಪಿನಲ್ಲಿ 3ಕೆಜಿ 311 ಗ್ರಾಂ ಚಿನ್ನ ಇಟ್ಟುಕೊಂಡು ಬಂದಿದ್ದು, ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...