alex Certify BIG NEWS: ಪ್ರಯಾಣಿಕರ ಸಂಖ್ಯೆಯಲ್ಲಿ ದಾಖಲೆ ಬರೆದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಯಾಣಿಕರ ಸಂಖ್ಯೆಯಲ್ಲಿ ದಾಖಲೆ ಬರೆದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರ ಸಂಖ್ಯೆಯಲ್ಲಿ ದಾಖಲೆ ಬರೆದಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅಕ್ಟೋಬರ್ ಕೊನೆಯ ವಾರದವರೆಗೆ ಬರೋಬ್ಬರಿ 16.3 ಮಿಲಿಯನ್ ಪ್ರಯಾಣಿಕರು ಈ ವಿಮಾನ ನಿಲ್ದಾಣವನ್ನು ತಮ್ಮ ಪ್ರಯಾಣಕ್ಕೆ ಬಳಕೆ ಮಾಡಿಕೊಂಡಿದ್ದಾರೆ.

ಕಳೆದ ವರ್ಷದ ಇದೇ ಸಾಲಿಗೆ ಹೋಲಿಸಿದರೆ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಕಳೆದ ಆರ್ಥಿಕ ವರ್ಷದಲ್ಲಿ 6.61 ಮಿಲಿಯನ್ ಪ್ರಯಾಣಿಕರ ಸಂಖ್ಯೆ ದಾಖಲಾಗಿತ್ತು. ಆದರೆ ಈ ಬಾರಿ 16.30 ಮಿಲಿಯನ್ ಪ್ರಯಾಣಿಕರ ಸಂಖ್ಯೆ ದಾಖಲಾಗಿದೆ. ಅದರಲ್ಲೂ ದೀಪಾವಳಿ ಸಂದರ್ಭದಲ್ಲಿ ಅತಿ ಹೆಚ್ಚು ಪ್ರಯಾಣಿಕರು ತಮ್ಮ ಆಗಮನ ಹಾಗೂ ನಿರ್ಗಮನಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬಳಸಿದ್ದಾರೆ.

ಈ ಪೈಕಿ 14.34 ಮಿಲಿಯನ್ ಪ್ರಯಾಣಿಕರು ದೇಶಿಯ ವಿಮಾನ ಸಂಚಾರ ನಡೆಸಿದರೆ 1.96 ಮಿಲಿಯನ್ ಪ್ರಯಾಣಿಕರು ಅಂತರರಾಷ್ಟ್ರೀಯ ಪ್ರಯಾಣ ಬೆಳೆಸಿದ್ದಾರೆ. 2019 ಕ್ಕೆ ಹೋಲಿಸಿದರೆ ದೇಶಿಯ ವಿಮಾನ ಪ್ರಯಾಣಿಕರಲ್ಲಿ 102 ರಷ್ಟು ಹೆಚ್ಚಳವಾಗಿದ್ದರೆ, ಅಂತರಾಷ್ಟ್ರೀಯ ಪ್ರಯಾಣಿಕರಲ್ಲಿ ಶೇಕಡ 85 ಹೆಚ್ಚಳ ಕಂಡುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...