alex Certify Bengaluru : ಕೆಲಸದಿಂದ ಕಿತ್ತು ಹಾಕಿದ್ದಕ್ಕೆ ‘TCS’ ಕಂಪನಿಗೆ ‘ಹುಸಿ ಬಾಂಬ್ ಕರೆ’ ಮಾಡಿದ ಮಾಜಿ ಉದ್ಯೋಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : ಕೆಲಸದಿಂದ ಕಿತ್ತು ಹಾಕಿದ್ದಕ್ಕೆ ‘TCS’ ಕಂಪನಿಗೆ ‘ಹುಸಿ ಬಾಂಬ್ ಕರೆ’ ಮಾಡಿದ ಮಾಜಿ ಉದ್ಯೋಗಿ

ಬೆಂಗಳೂರು : ಬೆಂಗಳೂರಿನ ಟಿಸಿಎಸ್ ಕಂಪನಿಯಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕೆಲಸದಿಂದ ಕಿತ್ತು ಹಾಕಿದ್ದಕ್ಕೆ ಮಾಜಿ ಉದ್ಯೋಗಿಯೇ ಹುಸಿ ಬಾಂಬ್ ಕರೆ ಮಾಡಿದ್ದಾಳೆ ಎಂದು ತಿಳಿದು ಬಂದಿದೆ.

ಕಂಪನಿಯ ಬಿ ಬ್ಲಾಕ್ ನಲ್ಲಿ ಬಾಂಬ್ ಇರುವುದಾಗಿ ಬೆದರಿಕೆ ಕರೆ ಬಂದಿದ್ದು, ಆತಂಕಗೊಂಡ ಉದ್ಯೋಗಿಗಳು ಕಂಪನಿಯಿಂದ ಹೊರಗಡೆ ಬಂದಿದ್ದಾರೆ. ಬೆಂಗಳೂರಿನಲ್ಲಿ ಯುವತಿಯೊಬ್ಬಳು ಕೆಲಸದಿಂದ ತೆಗೆದುಹಾಕಿದ್ದಕ್ಕೆ ಕಂಪನಿಗೇ ಹುಸಿ ಬಾಂಬ್ ಕರೆ ಮಾಡಿ ಆತಂಕ ಸೃಷ್ಟಿಸಿದ್ದಾಳೆ.

ಬೆಳಗಾವಿ ಮೂಲದ ಯುವತಿಯೊಬ್ಬಳು ಕರೆ ಮಾಡಿ ಬೆದರಿಕೆ ಹಾಕಿರುವುದು ಬೆಳಕಿಗೆ ಬಂದಿದೆ. ಈಕೆ ಕುಡಿದ ಮತ್ತಿನಲ್ಲಿ ಟಿಸಿಎಸ್ ಕಂಪನಿಯ ಚಾಲಕನೊಬ್ಬನಿಗೆ ಬಿ ಬ್ಲಾಕ್ ನಲ್ಲಿ ಬಾಂಬ್ ಇದೆ ಎಂದು ಕರೆ ಮಾಡಿದ್ದಾಳೆ. ಸದ್ಯ ಯುವತಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಟಿಸಿಎಸ್ ಕಂಪನಿಗೆ ಹುಸಿ ಬಾಂಬ್ ಕರೆ ಬಂದಿದ್ದು, ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...