ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಮತ್ತೋರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಯುವಕನೋರ್ವ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ. ಮೆಟ್ರೋದಿಂದ ಇಳಿಯುತ್ತಿದ್ದಂತೆ ಯುವಕನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.
ಘಟನೆ ಬಳಿಕ ಯುವತಿ ಯುವಕನಿಗೆ ಶಿಕ್ಷೆ ಆಗಬೇಕೆಂದು ಆಗ್ರಹಿಸಿದ್ದಾಳೆ. ನಂತರ ಉಪ್ಪಾರ ಪೇಟೆ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ನಂತರ ಇನ್ನೊಮ್ಮೆ ತಪ್ಪು ಮಾಡದಂತೆ ಎಚ್ಚರಿಕೆ ನೀಡಿ ಬಿಟ್ಟು ಕಳುಹಿಸಿದ್ದಾರೆ. ಕೃತ್ಯ ಎಸಗಿದ್ದ ಯುವಕ ಮೂಲತಃ ಉತ್ತರ ಭಾರತದ ನಿವಾಸಿ ಎಂದು ತಿಳಿದುಬಂದಿದೆ. ಜನವರಿ 1 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.