ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 3 ಕೋಟಿ ಮೌಲ್ಯದ ವಸ್ತುಗಳನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಸ್ತುಗಳನ್ನು ಪ್ರಯಾಣಿಕರಿಂದ ವಶಕ್ಕೆ ಪಡೆಯಲಾಗಿದೆ. ಕಳೆದ 8 ದಿನಗಳಲ್ಲಿ ಒಟ್ಟು 3 ಕೋಟಿ ಮೌಲ್ಯದ ವಸ್ತುಗಳು ಜಪ್ತಿಯಾಗಿವೆ.
ವಿದೇಶದಿಂದ ಆಗಮಿಸಿದ್ದ 31 ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಿದಾಗ ಕಳ್ಳಸಾಗಾಣೆ ಮಾಡುತ್ತಿರುವ ವಸ್ತುಗಳು ಪತ್ತೆಯಾಗಿವೆ. ಸಿಗರೇಟ್, ಎಲೆಕ್ಟ್ರಾನಿಕ್ ಗ್ಯಾಜೆಟ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಥಾಯ್ಲೆಂಡ್, ಮಲೇಷ್ಯಾ, ಸಿಂಗಾಪುರ, ಯುನೈಟೆಡ್ ಅರಬ್ ಎಮಿರೇಟ್ಸ್ ನಿಂದ ಬೆಂಗಳೂರಿಗೆ ಆಗಮಿಸಿದ ಒತ್ಟು 31 ಪ್ರಯಾಣಿಕರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವಸ್ತುಗಳು ಸಿಕ್ಕಿವೆ.
3.2 ಕೋಟಿ ಮೌಲ್ಯದ 5,13,400 ಸಿಗರೇಟ್ ಗಳು, 43 ಲ್ಯಾಪ್ ಟಾಪ್ ಗಳು, 16 ಐಫೋನ್ ಗಳನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.