ಬೆಂಗಳೂರು: ಆಕ್ಸಿಡೆಂಟ್ ಮಾಡಿರುವುದಾಗಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಾಹನ ಸವಾರರನ್ನು ಬೆದರಿಸಿ ಆರೋಪಿಗಳು ಸುಲಿಗೆ ಮಾಡುತ್ತಿದ್ದರು. ಜಮೀಲ್ ಖಾನ್ ಎಂಬುವನನ್ನು ಬಂಧಿಸಲಾಗಿದೆ. ಮತ್ತೋರ್ವ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ.
ಲಾಲ್ ಬಾಗ್, ಹೊಸೂರು ರಸ್ತೆಯಲ್ಲಿ ಆರೋಪಿಗಳು ಸಕ್ರಿಯರಾಗಿದ್ದರು. ಒಂಟಿಯಾಗಿ ಸಂಚರಿಸುವ ವಾಹನ ಸವಾರರನ್ನು ಅಡ್ಡಗಟ್ಟಿ ಅಪಘಾತ ಮಾಡಿದ್ದೀರಿ ಎಂದು ಬೆದರಿಸಿ ಸುಲಿಗೆ ಮಾಡುತ್ತಿದ್ದರು. ಬಂಧಿತ ಆರೋಪಿಗಳಿಂದ 15,000 ರೂ. ನಗದು, ಒಂದು ಬೈಕ್ ವಶಕ್ಕೆ ಪಡೆಯಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.