alex Certify ಸ್ನೇಹಿತನ ಸೋಗಿನಲ್ಲಿ ಯುವತಿ ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ ಕಾಮುಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ನೇಹಿತನ ಸೋಗಿನಲ್ಲಿ ಯುವತಿ ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ ಕಾಮುಕ ಅರೆಸ್ಟ್

ಬೆಂಗಳೂರು: ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಮಧುಸೂದನ್ ಬಂಧಿತ ಆರೋಪಿ ಎಂದು ಹೇಳಳಾಗಿದೆ.

ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಾರ್ಚ್ 21 ರಂದು ರಾತ್ರಿ ಯುವತಿ ಮತ್ತು ಸ್ನೇಹಿತರು ಚರ್ಚ್ ಸ್ಟ್ರೀಟ್ ನಲ್ಲಿರುವ ಪಬ್ ಗೆ ಬಂದಿದ್ದರು. ಈ ವೇಳೆ ಸ್ನೇಹಿತನ ರೀತಿ ಯುವತಿಗೆ ಬಳಿಗೆ ಬಂದಿದ್ದ ಕಾಮುಕ ಮಧುಸೂದನ್ ಅಸಭ್ಯವಾಗಿ ಯುವತಿ ತಬ್ಬಿಕೊಂಡು ಅನುಚಿತವಾಗಿ ವರ್ತಿಸಿದ್ದಾನೆ.

ಅಲ್ಲದೇ, ಯುವತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ ಎನ್ನಲಾಗಿದ್ದು, ಈ ಬಗ್ಗೆ ಯುವತಿ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...