alex Certify SHOCKING: ಹಾಡಹಗಲೇ ಮನೆಗೆ ನುಗ್ಗಿ ಮಗು ಹೊತ್ತೊಯ್ದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಹಾಡಹಗಲೇ ಮನೆಗೆ ನುಗ್ಗಿ ಮಗು ಹೊತ್ತೊಯ್ದ ಮಹಿಳೆ

ಬೆಂಗಳೂರು: ಹಾಡಹಗಲೇ ಮನೆಗೆ ನುಗ್ಗಿ ಮಗು ಹಾಗೂ ಮೊಬೈಲ್ ಕದ್ದು ಪರಾರಿಯಾಗಿದ್ದ ಮಹಿಳೆಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಲಾಸಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು 42 ದಿನದ ನವಜಾತ ಹೆಣ್ಣು ಶಿಶುವಿಗೆ ಹಾಲುಣಿಸಿ ಮಗುವಿನೊಂದಿಗೆ ಮನೆಯ ಹಾಲ್ ನಲ್ಲಿ ನಿದ್ದೆಗೆ ಜಾರಿದ್ದಾರೆ. ಮನೆಯ ಬಾಗಿಲು ಹಾಕಿರಲಿಲ್ಲ. ಅಲ್ಲಿಗೆ ಬಂದ ಮಹಿಳೆ ಮುಳಬಾಗಿಲು ಮೂಲದ ಆಯೇಷಾ ಮಗು ಹಾಗೂ ಮೊಬೈಲ್ ಫೋನ್ ದೋಚಿಕೊಂಡು ಪರಾರಿಯಾಗಿದ್ದಾಳೆ.

ಮಗು ಕಳ್ಳತನವಾದ ಬಗ್ಗೆ ಕಲಾಸಿಪಾಳ್ಯ ಠಾಣೆಗೆ ದೂರು ನೀಡಲಾಗಿದೆ. ಮಾಗಡಿ ರೋಡ್ ರೈಲ್ವೆ ಕ್ವಾಟ್ರಸ್ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮಹಿಳೆಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಪೊಲೀಸರು ಮಗುವನ್ನು ವಶಕ್ಕೆ ಪಡೆದು ಪೋಷಕರ ಮಡಿಲಿಗೆ ಒಪ್ಪಿಸಿದ್ದಾರೆ. ಆರೋಪಿ ಆಯೇಷಾಳನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...