ಬೆಂಗಳೂರು : ನಾಳೆಯಿಂದ 5 ದಿನ ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭವಾಗಲಿದ್ದು, ಈ ಹಿನ್ನೆಲೆ ಬೆಂಗಳೂರಿನಲ್ಲಿ 5 ದಿನ ಈ ಮಾರ್ಗದಲ್ಲಿ ಸಂಚಾರ ಬಂದ್ ಆಗಲಿದೆ.
ಬಸವನಗುಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾತ್ಕಾಲಿಕವಾಗಿ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗುತ್ತಿದೆ. ಬದಲಿ ಮಾರ್ಗದಲ್ಲಿ ವಾಹನ ಸವಾರರು ಸಂಚರಿಸಬಹುದಾಗಿದೆ.
ತ್ಯಾಗರಾಜನಗರ/ಬನಶಂಕರಿ ಕಡೆಯಿಂದ 5ನೇ ಮುಖ್ಯರಸ್ತೆ, ಎನ್.ಆರ್.ಕಾಲೋನಿ ರಸ್ತೆಯಲ್ಲಿ ಬುಲ್ಟೆಂಪಲ್ ರಸ್ತೆ ಮೂಲಕ ಚಾಮರಾಜಪೇಟೆ ಕಡೆಗೆ ಸಂಚರಿಸುವ ವಾಹನಗಳು ಬುಲ್ಟೆಂಪಲ್ ರಸ್ತೆಯ ಕಾಮತ್ ಯಾತ್ರಿ ನಿವಾಸ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಅಶೋಕ್ನಗರ 2ನೇ ಕ್ರಾಸ್ ರಸ್ತೆ ಮೂಲಕ ಕತ್ರಿಗುಪ್ಪೆ ರಸ್ತೆ ಜಂಕ್ಷನ್ನಲ್ಲಿ ಬಲತಿರುವು ಪಡೆದು 3ನೇ ಮುಖ್ಯರಸ್ತೆ ನಾರಾಯಣಸ್ವಾಮಿ ಸರ್ಕಲ್ನಲ್ಲಿ ಕೆ.ಜಿ.ನಗರ ಮುಖ್ಯರಸ್ತೆ ಅಥವಾ ಹಯವದನರಾವ್ ರಸ್ತೆ ಮೂಲಕ ರಾಮಕೃಷ್ಣಾಶ್ರಮ ಜಂಕ್ಷನ್ನಿಂದ ಚಾಮರಾಜಪೇಟೆ ಕಡೆಗೆ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
ಲಾಲ್ಬಾಗ್ ವೆಸ್ಟ್ಗೇಟ್ ಕಡೆಯಿಂದ ವಾಣಿವಿಲಾಸ್ ರಸ್ತೆಯ ಮುಖಾಂತರ ಮತ್ತು 5ನೇ ಮುಖ್ಯರಸ್ತೆ ಚಾಮರಾಜ ಪೇಟೆ ಹಾಗೂ ಗಾಂಧಿಬಜಾರ್ ಮುಖ್ಯರಸ್ತೆ ಕಡೆಯಿಂದ ಬುಲ್ ಟೆಂಪಲ್ ಮುಖಾಂತರ ಹನುಮಂತ ನಗರದ ಕಡೆಗೆ ಸಂಚರಿಸುವ ವಾಹನಗಳು ಬುಲ್ ಟೆಂಪಲ್ ರಸ್ತೆಯ ರಾಮಕೃಷ್ಣ ಆಶ್ರಮ ವೃತ್ತದಲ್ಲಿ ಬಲತಿರುವು ಪಡೆದು, ಹಯವದನರಾವ್ ರಸ್ತೆಯಲ್ಲಿ ಸಾಗಿ, ಗವಿಪುರಂ 3ನೇ ಅಡ್ಡರಸ್ತೆಯ ಮೂಲಕ ಮುಂದೆ ಸಾಗಿ ಮೌಂಟ್ ಜಾಯ್ ರಸ್ತೆಯ ಮೂಲಕ ಹನುಮಂತನಗರಕ್ಕೆ ಹೋಗಬೇಕು.
)ಆರ್.ವಿ. ಟೀಚರ್ಸ್ ಕಾಲೇಜ್ ಜಂಕ್ಷನ್ ಕಡೆಯಿಂದ ಟ್ರಿನಿಟಿ ಆಸ್ಪತ್ರೆ ರಸ್ತೆ ಮತ್ತು ಕೆ.ಆರ್ ರಸ್ತೆಯಲ್ಲಿ ಬ್ಯೂಗಲ್ ರಾಕ್ ರಸ್ತೆ ಮೂಲಕ ಹನುಮಂತನಗರ ಕಡೆಗೆ ಹೋಗುವ ವಾಹನಗಳು ಠಾಗೋರ್ ಸರ್ಕಲ್ (ಮಾರುಕಟ್ಟೆ ರಸ್ತೆ-ಬ್ಯೂಗಲ್ ರಾಕ್ ರಸ್ತೆ ಜಂಕ್ಷನ್)ನಲ್ಲಿ ಬಲತಿರುವು ಪಡೆಯಬೇಕು.
ಗಾಂಧಿಬಜಾರ್ ಮುಖ್ಯರಸ್ತೆ ಮೂಲಕ ರಾಮಕೃಷ್ಣ ಆಶ್ರಮ ಜಂಕ್ಷನ್ ಅಲ್ಲಿಂದ ಹಯವಧನರಾವ್ ರಸ್ತೆಯಲ್ಲಿ ಗವಿಪುರಂ ಎಕ್ಸ್ಟೆಂಕ್ಷನ್ 3ನೇ ಅಡ್ಡರಸ್ತೆಯಲ್ಲಿ ಮುಂದೆ ಸಾಗಿ, ಮೌಂಟ್ ಜಾಯ್ ರಸ್ತೆಯ ಮೂಲಕ ಹನುಮಂತನಗರಕ್ಕೆ ಹೋಗಬೇಕು.
ತ್ಯಾಗರಾಜನಗರ/ಬನಶಂಕರಿ ಕಡೆಯಿಂದ 5ನೇ ಮುಖ್ಯರಸ್ತೆ ಎನ್.ಆರ್. ಕಾಲೋನಿ ರಸ್ತೆಯಲ್ಲಿ ಬುಲ್ ಟೆಂಪಲ್ ರಸ್ತೆ ಮೂಲಕ ಚಾಮರಾಜಪೇಟೆ ಕಡೆಗೆ ಸಾಗುವ ವಾಹನಗಳು ಬುಲ್ ಟೆಂಪಲ್ ರಸ್ತೆಯ ಕಾಮತ್ ಯಾತ್ರಿ ನಿವಾಸ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಆಶೋಕನಗರ 2ನೇ ಕ್ರಾಸ್ (ಬಿ.ಎಂ.ಎಸ್. ಕಾಲೇಜ್ ಹಾಸ್ಟೆಲ್ ರಸ್ತೆ) ರಸ್ತೆಯಲ್ಲಿ ಸಾಗಿ ಅಲ್ಲಿಂದ ಮುಂದೆ ಕತ್ತಿಗುಪ್ಪೆ ರಸ್ತೆಯ ಜಂಕ್ಷನ್ನಲ್ಲಿ ಬಲ ತಿರುವು ಪಡೆದು 3ನೇ ಮುಖ್ಯರಸ್ತೆ ಮೂಲಕ ರಾಮಕೃಷ್ಣಾಶ್ರಮ ಜಂಕ್ಷನ್ನಿಂದ ಚಾಮರಾಜಪೇಟೆ ಕಡೆಗೆ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
ಪಾರ್ಕಿಂಗ್ ವ್ಯವಸ್ಥೆ
ಎ.ಪಿ.ಎಸ್.ಕಾಲೇಜ್ ಆಟದ ಮೈದಾನ, ಎನ್.ಆರ್. ಕಾಲೋನಿ, ಹಯವಧನರಾವ್ ರಸ್ತೆಯಲ್ಲಿರುವ ಕೊಹಿನೂರು ಆಟದ ಮೈದಾನ ಹಾಗೂ ರಾಮಕೃಷ್ಣ ಆಶ್ರಮ ಜಂಕ್ಷನ್, ಬುಲ್ ಟೆಂಪಲ್ ರಸ್ತೆಯಲ್ಲಿರುವ ಉದಯಭಾನು ಆಟದ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.