
ಬೆಂಗಳೂರು: ಬೆಂಗಳೂರು ವಿಜಯನಗರದ ಎಂಸಿ ಲೇಔಟ್ ನಲ್ಲಿ ಬೃಹತ್ ಮರ ಬಿದ್ದು ಆಟೋ ಜಖಂಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ವಿಜಯನಗರ ಎಂಸಿ ಲೇಔಟ್ ನಲ್ಲಿ ಇಬ್ಬರು ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಆಟೋ ಮೇಲೆ ಭಾರಿ ಗಾತ್ರದ ಮರ ಏಕಾಏಕಿ ಬಿದ್ದಿದೆ. ಈ ವೇಳೆ ಆಟೋ ಚಾಲಕ ಶಿವರುದ್ರಯ್ಯ ಗಂಭೀರವಾಗಿ ಗಾಯಗೊಂಡಿದ್ದು, ಮತ್ತಿಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಶಿವರುದ್ರಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಬಿಬಿಎಂಪಿ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.