
ಬೆಂಗಳೂರು: ‘ಬೆಂಗಳೂರು ಬಂದ್’ ಹಿನ್ನಲೆಯಲ್ಲಿ ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ರಜೆ ಘೋಷಣೆ ಮಾಡಿದ್ದಾರೆ. ನಗರದ ಎಲ್ಲಾ ಡಿಡಿಪಿಐ, ಬಿಇಒಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದು, ವಿದ್ಯಾರ್ಥಿಗಳ ಸುರಕ್ಷತೆ, ರಕ್ಷಣೆ ದೃಷ್ಟಿಯಿಂದ ಸೆ. 26 ರಂದು ರಜೆ ಘೋಷಣೆ ಮಾಡಲಾಗಿದೆ.
ಕಾವೇರಿ ನದಿ ನೀರಿನ ವಿಚಾರವಾಗಿ ಸೆ. 26 ರಂದು ಬೆಂಗಳೂರು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.