ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಶಿಕ್ಷಕರು, ಉಪನ್ಯಾಸಕರಿಗೂ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬಂದ್ ನಿಂದಾಗಿ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರು ನಾಳೆ ರಜೆ ಘೋಷಣೆ ಮಾಡಿದ್ದಾರೆ.
‘ಬೆಂಗಳೂರು ಬಂದ್’ ಹಿನ್ನಲೆಯಲ್ಲಿ ಸೆ. 26 ರಂದು ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.