alex Certify Bengaluru Bandh Updates : 2 ನೇ ಬಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru Bandh Updates : 2 ನೇ ಬಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ ಅಸ್ವಸ್ಥ

ಬೆಂಗಳೂರು : ಬೆಂಗಳೂರಿನಲ್ಲಿ ಕಾವೇರಿ ಹೋರಾಟ ಮುಂದುವರೆದಿದ್ದು, ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ.

ಫ್ರೀಡಂ ಪಾರ್ಕ್ ನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ರೈತರೊಬ್ಬರು 2 ನೇ ಬಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮೊದಲು ಬಾರಿ ರೈತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುವಾಗ ಪೊಲೀಸರು ಬಂದು ತಡೆದಿದ್ದರು. ಇದಾದ ಬಳಿಕ 2 ನೇ ಬಾರಿ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಸ್ಥಳೀಯರು ರೈತನನ್ನು ರಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಪ್ರತಿಭಟನೆ ಮುಂದುವರೆದಿದ್ದು, ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಮುಂದುವರೆದು ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...